ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತ: ಯುವಕನ ಸ್ಥಿತಿ ಗಂಭೀರ

 ಮಂಗಳೂರು (ಜು. 28):   ಯುವಕನಿಗೆ ದುಷ್ಕರ್ಮಿಗಳ ತಂಡ ಚಾಕು ಇರಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.  ಸುರತ್ಕಲ್ ‌ಮಂಗಲಪೇಟೆಯಲ್ಲಿ ಫಾಝಿಲ್‌ಗೆ  ದುಷ್ಕರ್ಮಿಗಳ ಚಾಕು ಇರಿದಿದ್ದಾರೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ಪೊಲೀಸರ ತನಿಖೆ ನಡೆಸುತ್ತಿದ್ದಾರೆ. ಅಂಗಡಿಗೆ ನುಗ್ಗಿ ಫಾಜಿಲ್​ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆಸಲಾಗಿದೆ. ಘಟನೆ ಸಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. 

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಈಗ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಈ ಬೆನ್ನಲ್ಲೇ ಸದ್ಯ ಕರಾವಳಿ ಭಾಗದಲ್ಲಿ ಬಿಗು ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮತ್ತೋರ್ವ ಯುವಕನಿಗೆ ಚಾಕು ಇರಿತವಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ಜಾಕೀರ್ ಮತ್ತು ಶಫೀಕ್ ನನ್ನು ಪೊಲೀಸರು ನ್ಯಾಯಾಲಕಕ್ಕೆ  ಹಾಜರುಪಡಿಸಿದ್ದು, ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Post a Comment

Previous Post Next Post