No title

 


ದಿನಾಂಕಃ-13-10-2020  ರಂದು ಮದ್ಯಾಹ್ನ ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ ವಾಸಿ 07 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ, ನಾಗಪ್ಪ ಎಂಬ ವ್ಯಕ್ತಿಯು ಸದರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆ ಶಿವಮೊಗ್ಗದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.


ಆಗಿನ ತನಿಖಾಧಿಕಾರಿಗಳಾದ ಶ್ರೀ ಅಭಯ್‌ ಪ್ರಕಾಶ್‌ ಸೋಮನಾಳ್, ಪಿಐ, ಮಹಿಳಾ ಪೊಲೀಸ್‌ ಠಾಣೆರವರು ಪ್ರಕರಣದ ತನಿಖೆ ಕೈಗೊಂಡು ಸದರಿ  ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ದಿನಾಂಕ 20-08-2022 ರಂದು ಆರೋಪಿ ನಾಗಪ್ಪ, 65 ವರ್ಷ, ಶಿವಮೊಗ್ಗ  ಈತನ ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ ಜೀವಾವಧಿ ಶಿಕ್ಷೆ ಮತ್ತು 60,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿರುತ್ತಾರೆ.

Post a Comment

Previous Post Next Post