ಮುರುಘಾ ಶ್ರೀಗಳ ಮೇಲೆ ಎಫ್ ಐಆರ್, ತನಿಖೆ ನಂತರ ಸತ್ಯ ಹೊರಬೀಳಲಿದೆ- ಸಿಎಂ ಬಸವರಾಜ ಬೊಮ್ಮಾಯಿ

ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್ ಐ ಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

                         ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By :Rekha.M
Online Desk
ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್ ಐ ಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ತನಿಖೆ ನಂತರ ಸತ್ಯ ಹೊರಗೆ ಬರಲಿದೆ ಎಂದರು.
ಇದೊಂದು ಪ್ರಮುಖ ಪ್ರಕರಣವಾಗಿದ್ದು, ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿದರು.

Post a Comment

Previous Post Next Post