ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಮಳೆ: 11 ಮಂದಿ ಸಾವು

 


ಪಾಟ್ನಾ: ಬಿಹಾರದ ವಿವಿಧ ಭಾಗಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 11 ಮಂದಿ ಮೃತಪಟ್ಟಿದ್ದು, ಕಳೆದ 2 ದಿನದಲ್ಲಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ ತಲಾ ನಾಲ್ವರು ಮತ್ತು ಸುಪೌಲನಲ್ಲಿ ಮೂವರು ಮೃತಪಟ್ಟಿದ್ದಾರೆ.

ಜನಜೀವನ ಅಸ್ತವ್ಯಸ್ತವಾಗಿದ್ದು ಮಹಾ ಮಳೆಗೆ ಗಾಮೀಣ ಪ್ರದೇಶದ ಜನರು ಬೆಚ್ಚಿಬಿದ್ದಿದ್ದಾರೆ. ಮೃತರ ಸಂಬಂಧಿಕರಿಗೆ ತಕ್ಷಣವೇ 4 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅವಘಡಗಳನ್ನು ತಪ್ಪಿಸಲು ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.


Post a Comment

Previous Post Next Post