15 ಸಾಧಕರಿಗೆ ರಾಜ್ಯ ಮಟ್ಟದ ಸದ್ಭಾವನಾ ಪ್ರಶಸ್ತಿ ಪ್ರದಾನ

 ನಗರದ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲಾಬಂಧು ಫೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರಿಗೆ  ರಾಜ್ಯ ಮಟ್ಟದ...

                     ಸದ್ಭಾವನಾ ಪ್ರಶಸ್ತಿ ಪ್ರದಾನ

By : Rekha.M
Online Desk

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲಾಬಂಧು ಫೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರಿಗೆ  ರಾಜ್ಯ ಮಟ್ಟದ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಯಂಕಾಲ ನಡೆದ ಸುಂದರ ಸಮಾರಂಭದಲ್ಲಿ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅವರು  ಮಾತನಾಡಿ ಪ್ರಶಸ್ತಿ ಸ್ವೀಕರಿಸುತ್ತಿರುವ 15 ಜನರಿಗೆ ಶುಭಾಶಯ ಕೋರಿ ಸಮಾಜದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಒಳ್ಳೆಯ ಕೆಲಸ ಮಾಡುತ್ತಾ ಬನ್ನಿ. ಸ್ವಸ್ಥ ಹಾಗೂ ಸುಂದರ ಸಮಾಜ ಕಟ್ಟುವಲ್ಲಿ ಮುಂದಾಗಿ. ಇಂಥ ಅರ್ಥಪೂರ್ಣ ಕಾರ್ಯ ಕ್ರಮ ಆಯೋಜನೆ ಮಾಡಿದ ಕಲಾಬಂದು ಪೌಂಢೇಶನ್ ಮುಖ್ಯಸ್ಥ ನರಸಿಂಹರಾಜು ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಪತ್ರಕರ್ತ ಚಂದ್ರಶೇಖರ್ ಯಲಬುರ್ತಿ ಅವರಿಗೆ ರಾಜ್ಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಳಗ್ಗೆಯಿಂದಲೇ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು. ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ, ಹಾಡುಗಳು, ನಾಟಕ ರೂಪಕಗಳು ಮೂಡಿಬಂದವು.Post a Comment

Previous Post Next Post