5,379 ಹೊಸ ಕರೋನಾ ಪ್ರಕರಣಗಳು ಪತ್ತೆ

 

ವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 5,379 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,44,72,241ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 50,594 ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳ ದಲ್ಲಿ 11 ಜನರು ಸೇರಿದಂತೆ ದೇಶದಲ್ಲಿ 27 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

24 ಗಂಟೆಗಳ ಅವಧಿಯಲ್ಲಿ 7,094 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 4,38,93,590 ಜನರು ಇದುವರೆಗೆ ಚೇತರಿಸಿಕೊಂಡಿದ್ದಾರೆ. ಈವರೆಗೆ 213.91 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Post a Comment

Previous Post Next Post