ಕಾರಾಗೃಹದಲ್ಲಿ ರಾತ್ರಿಯಿಡೀ ಕಳೆದ ಮುರುಘಾ ಶ್ರೀಗಳಿಗೆ ಎದೆನೋವು: ವೈದ್ಯಕೀಯ ತಪಾಸಣೆಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್

 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

                         ಮುರುಘಾ ಶ್ರೀಗಳ ಸಂಗ್ರಹ ಚಿತ್ರ

By : Rekha.M
Online Desk

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಇಂದು ಬೆಳಗ್ಗೆ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಕರೆತರಲಾಗಿದ್ದು ವೈದ್ಯರು ಅವರ ಆರೋಗ್ಯ ತಪಾಸಣೆ ಮಾಡಿದ್ದಾರೆ.

ಕಳೆದ ಮಧ್ಯರಾತ್ರಿ ಮುರುಘಾ ಮಠಕ್ಕೆ ಆಗಮಿಸಿದ ಪೊಲೀಸರು ತನಿಖಾಧಿಕಾರಿ ಅನಿಲ್​​​​​ ಕುಮಾರ್​ ನೇತೃತ್ವದಲ್ಲಿ ಸ್ವಾಮೀಜಿಯನ್ನು ಬಂಧಿಸಿದರು. ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಜೈಲಿಗೆ ಕರೆದೊಯ್ಯಲಾಗಿದೆ.  ಜೈಲಿನ ಕೋಣೆಯಲ್ಲಿ ನಿದ್ದೆ ಮಾಡದೇ ಚಡಪಡಿಸುತ್ತಿದ್ದ ಸ್ವಾಮೀಜಿ, ಕೋಣೆಯಲ್ಲಿ ಅಡ್ಡಾಡಿದರು ಎಂದು ತಿಳಿದುಬಂದಿದೆ. ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಕೇಳುವ ಸಾಧ್ಯತೆಗಳಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಕೋರುವ ಪೊಲೀಸರು, ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.

ತಲೆಮೇಲೆ ಮೈತುಂಬಾ ಬಿಳಿ ಬಟ್ಟೆಯನ್ನು ಹೊದ್ದು ನಿನ್ನೆ ಪೊಲೀಸರ ಜೊತೆ ಮಠದಿಂದ ತೆರಳಿದ್ದ ಶ್ರೀಗಳು ಇಂದು ಬೆಳಗ್ಗೆ ಆಸ್ಪತ್ರೆಗೆ ಸಹ ಮೈತುಂಬಾ ಬಿಳಿಬಟ್ಟೆಯನ್ನು ಹೊದ್ದುಕೊಂಡೇ ಬಂದರು. ಅಗತ್ಯಬಿದ್ದರೆ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ವರ್ಗಾಯಿಸಲಾಗುವ ಸಾಧ್ಯತೆಯಿದೆ. ಎದೆನೋವು ಎಂದು ಸಮಸ್ಯೆ ಹೇಳಿಕೊಂಡು ಬಂದ ಶ್ರೀಗಳಿಗೆ ಇಸಿಜಿ ಮಾಡಲಾಗಿದೆ. ಆಸ್ಪತ್ರೆಯ ಮೂವರು ವೈದ್ಯರು ತಪಾಸಣೆ ಮಾಡುತ್ತಿದ್ದಾರೆ. 


Post a Comment

Previous Post Next Post