ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಸಿಗಬೇಕು: ನಿತೀಶ್ ಕುಮಾರ್

 ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು. ಇದು ಆ ರಾಜ್ಯಗಳಲ್ಲಿ ಪ್ರಗತಿಯನ್ನು ಹೆಚ್ಚಿಸುತ್ತದೆ ಮತ್ತು ದೇಶವು ಅಭೂತಪೂರ್ವ ವೇಗದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ  ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

      ನಿತೀಶ್ ಕುಮಾರ್

By : Rekha.M
Online Desk

ಪಾಟ್ನಾ: ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು. ಇದು ಆ ರಾಜ್ಯಗಳಲ್ಲಿ ಪ್ರಗತಿಯನ್ನು ಹೆಚ್ಚಿಸುತ್ತದೆ ಮತ್ತು ದೇಶವು ಅಭೂತಪೂರ್ವ ವೇಗದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ  ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಕೇಂದ್ರದ ಜನರಿಗೆ ಅಧಿಕಾರ ಅನುಭವಿಸುವ ಆಸಕ್ತಿ ಮಾತ್ರ ಇದೆ. ಅವರು ನಿಜವಾಗಿಯೂ ಕೆಲಸ ಮಾಡುತ್ತಿದ್ದಾರೆಯೇ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದರು.
 
ಒಂದು ತಿಂಗಳ ಹಿಂದೆ ಜೆಡಿಯು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿತ್ತು. ನಿತೀಶ್ ಕುಮಾರ್ ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರು. ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವವರು ಅಧಿಕಾರವನ್ನು ಅನುಭವಿಸಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ನಿಜವಾಗಿಯೂ ಏನಾದರೂ ಕೆಲಸ ನಡೆಯುತ್ತಿದೆಯೇ? ರಾಜ್ಯಗಳು ತಮ್ಮ ಹಕ್ಕು ಪಡೆಯುತ್ತಿವೆಯೇ? ನಾನು ಈ ಹಿಂದೆಯೇ ಹೇಳಿದ್ದೇನೆ. ಬಿಹಾರ ಮಾತ್ರವಲ್ಲದೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಬೇಕು ಎಂದು ಮತ್ತೊಮ್ಮೆ ಹೇಳಿದ್ದಾರೆ.


    Post a Comment

    Previous Post Next Post