‘ಭಾರತ್ ಜೋಡೋ‌ ಯಾತ್ರೆ’: ಗುಂಡ್ಲುಪೇಟೆಯಲ್ಲಿ ಫ್ಲೆಕ್ಸ್ ಗಳಿಗೆ ಬ್ಲೇಡ್


 ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿ ಕೊಂಡಿರುವ ‘ಭಾರತ್ ಜೋಡೋ‌ ಯಾತ್ರೆ’ ಸೆ.30ರಂದು ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸುತ್ತಿದ್ದು, ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್‌ ಗಳನ್ನು ಗುರುವಾರ ಕಿಡಿಗೇಡಿ ಗಳು ಹರಿದಿದ್ದಾರೆ.

ಪಟ್ಟಣದಲ್ಲಿ ಸುರಭಿ‌ ಹೋಟೇಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ‌. ಎಐಸಿಸಿ‌ ನಾಯಕ ರಾಹುಲ್‌ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರ ಗಳಿರುವ ಫ್ಲೆಕ್ಸ್ ಅನ್ನು ಹರಿದಿ ದ್ದಾರೆ.

ಸ್ಥಳೀಯ ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸುತ್ತಿದ್ದರೆ, ಫ್ಲೆಕ್ಸ್ ಹಾಕಿರುವ ಜಾಗಗಳಲ್ಲಿ ಸಿಸಿಟಿವಿ ಕ್ಯಾಮರಾ ಇದ್ದರೆ ಅದನ್ನು ಪರಿಶೀಲಿಸಲಿ, ತಪ್ಪಿಸ್ಥರಿಗೆ ಶಿಕ್ಷೆಯಾಗಲಿ. ಫ್ಲೆಕ್ಸ್ ಹರಿದು ಹಾಕುವುದು ಹೇಡಿಗಳು ಮಾಡುವ ಕೆಲಸ ಎಂದು ಬಿಜೆಪಿಗರು ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಮತ್ತು ತಂಡ ಈಗಾಗಲೇ ತಮಿಳುನಾಡಿನ ಗಡಿಭಾಗ ಗುಡಲೂರಿಗೆ ಆಗಮಿಸಿದ್ದು ಶುಕ್ರವಾರ ಬೆಳಗ್ಗೆ ಬಂದಿಳಿಯಲಿದ್ದು 9 ರ ಸುಮಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. 5 ಸಾವಿರಕ್ಕೂ ಹೆಚ್ಚು ಮಂದಿ ಸಭಿಕರು ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಿಗೆ ಯಾತ್ರೆಯ ಒಂದೊಂದು ದಿನದ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

Post a Comment

Previous Post Next Post