ಚಿಕ್ಕಮಗಳೂರು: ಲವ್ ಜಿಹಾದ್ ಆರೋಪ, ಹಿಂದೂ ಕಾರ್ಯಕರ್ತರಿಂದ ಹಲ್ಲೆ; ದೂರು ದಾಖಲಿಸಿದ ಯುವಕ

 ಸಬ್ ರಿಜಿಸ್ಟ್ರಾರ್​ ಕಚೇರಿಗೆ ತೆರಳಿದ್ದ ಹಿಂದೂ ಹುಡುಗಿ ,ಮುಸ್ಲಿಂ ಹುಡುಗ ವಿವಾಹ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆ ತಡೆದಿದ್ದಾರೆ.


By: Rekha.M

Online desk

  ಚಿಕ್ಕಮಗಳೂರು: ಸಬ್ ರಿಜಿಸ್ಟ್ರಾರ್​ ಕಚೇರಿಗೆ ತೆರಳಿದ್ದ ಹಿಂದೂ ಹುಡುಗಿ ,ಮುಸ್ಲಿಂ ಹುಡುಗ ವಿವಾಹ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆ ತಡೆದಿದ್ದಾರೆ.

  ಈ ವೇಳೆ ಯುವಕನ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ‘ಲವ್ ಜಿಹಾದ್’ ಎಂದು ಆರೋಪಿಸಿದ್ದಾರೆ.  ಹಲ್ಲೆಗೆ ಸಂಬಂಧಿಸಿದಂತೆ ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

  ದಾಸರಹಳ್ಳಿ ಬಳಿಯ ಲಕ್ಷ್ಮೀಪುರದ ಹುಡುಗಿ ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಳು.  ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಹುಡುಗನನ್ನು 'ಲವ್ ಜಿಹಾದ್' ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವನಹಳ್ಳಿ ಮಹಿಳಾ ಪೊಲೀಸ್ ಠಾಣೆಗೆ ಜೋಡಿಯನ್ನು ಕರೆದೊಯ್ದಿದ್ದಾರೆ.

  ಘಟನೆ ನಡೆದ ನಂತರ ಜಿಲ್ಲಾ ಎಸ್ ಪಿ  ಉಮಾಪ್ರಶಾಂತ್ ಪೊಲೀಸ್ ಠಾಣೆಗೆ ಧಾವಿಸಿದ್ದಾರೆ. ಹುಡುಗಿಯನ್ನು ಮದುವೆಯಾಗಲು ನಿಶ್ಚಿತಾರ್ಥ ಮಾಡಿಕೊಂಡ ಹುಡುಗ ಹಿಂದೂ ಕಾರ್ಯಕರ್ತರು ನೈತಿಕ ಪೋಲೀಸ್  ಗಿರಿ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ, ಈ ಸಂಬಂಧ  ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

  ಯಾವುದೇ ಬಲವಂತವಿಲ್ಲದೆ ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಲು ಈ ಜೋಡಿ ಒಪ್ಪಿಗೆ ಸೂಚಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅವರು 'ಲವ್ ಜಿಹಾದ್' ಅನ್ನು ತಳ್ಳಿಹಾಕಿದ್ದಾರೆ ಮತ್ತು ನೈತಿಕ ಪೊಲೀಸ್‌ಗಿರಿ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕಳಾಗಿರುವ ಬಾಲಕಿಯ ತಾಯಿ ಶೋಭಾ ಮಹಿಳಾ ಠಾಣೆಗೆ ಆಗಮಿಸಿ ಪೊಲೀಸರಿಗೆ ಮಗಳನ್ನು ತೋರಿಸಬೇಕು ಎಂದು ಒತ್ತಾಯಿಸಿದರು.

  ಮುಸ್ಲಿಂ ಯುವಕನ ಜೊತೆ ನನ್ನ ಮಗಳು ವಿವಾಹವಾಗಲು ನನ್ನ ಸಮ್ಮತಿಯಿದೆ, ನನ್ನ ಮಗಳು ಮತ್ತು ಅಳಿಯ ಯಾವುದೇ ಗಾಯಗಳಿಲ್ಲದೇ ತೊಂದರೆಯಿಲ್ಲದೇ ಮನೆಗೆ ಬರಬೇಕು ಎಂದು  ಯುವತಿ ತಾಯಿ ಶೋಭಾ ಹೇಳಿದ್ದಾರೆ.  Post a Comment

  Previous Post Next Post