ಕೊಯಂಬತ್ತೂರ್: ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

 


ಕೊಯಂಬತ್ತೂರು: ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಕೊಯಂಬ ತ್ತೂರ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ವರದಿಯಾಗಿದೆ.

ಘಟನೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳಕ್ಕಾಗ ಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ರುವುದಾಗಿ ವರದಿ ವಿವರಿಸಿದೆ.

ಪಿಎಫ್ ಐನ ಹಲವು ಕಚೇರಿಗಳ ಮೇಲೆ ಎನ್ ಐಎ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ದಾಳಿ ನಡೆಸಿರುವುದಾಗಿ ಬಿಜೆಪಿ ಕಾರ್ಯಕರ್ತ ನಂದಕುಮಾರ್ ಎಎನ್ ಐಗೆ ತಿಳಿಸಿರುವುದಾಗಿ ವರದಿಯಾಗಿದೆ.


Post a Comment

Previous Post Next Post