ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಹಿಂದೆಯಿಂದ ಬಂದ ಲಾರಿ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರು -ಬೆಂಗಳೂರು

 ಓವರ್ ಟೆಕ್ ಮಾಡಲು ಹೋಗಿ ಕೆಎಸ ಆರ್ ಟಿಸಿ ಬಸ್ಸು ಲಾರಿಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಬೆಂಗಳೂರಿನ ಜಕ್ಕೂರು ಫ್ಲೈ ಓವರ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.

By : Rekha.M
Online Desk

ಬೆಂಗಳೂರು: ಓವರ್ ಟೆಕ್ ಮಾಡಲು ಹೋಗಿ ಕೆಎಸ ಆರ್ ಟಿಸಿ ಬಸ್ಸು ಲಾರಿಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಬೆಂಗಳೂರಿನ ಜಕ್ಕೂರು ಫ್ಲೈ ಓವರ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.

ದೇವನಹಳ್ಳಿ ಕಡೆಯಿಂದ ಬರುತ್ತಿದ್ದ ಬಸ್ಸು ಲಾರಿಯನ್ನ ಓವರ್ ಟೆಕ್ ಮಾಡುವ ಭರದಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರೇಳು ಮಂದಿ ಬಸ್ಸು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. 

ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
Post a Comment

Previous Post Next Post