ಬಿಬಿಎಂಪಿ ಕಸದ ಲಾರಿ ಢಿಕ್ಕಿ: ಚಿಕನ್ ತರಲು ಹೋದವನು ಹೆಣವಾದ!!

 ನಗರದ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಅಪಘಾತಕ್ಕೀಡಾಗಿದ್ದು, ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕ ಮೃತಪಟ್ಟಿದ್ದಾರೆ.

ಸಂಗ್ರಹ ಚಿತ್ರ

By : Rekha.M
Online Desk

ಬೆಂಗಳೂರು: ನಗರದ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಅಪಘಾತಕ್ಕೀಡಾಗಿದ್ದು, ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ 28 ವರ್ಷದ ಯುವಕ ಮೃತಪಟ್ಟಿದ್ದಾರೆ.

ಮೃತರನ್ನು ಮಾವಿನಕುಂಟೆ ಗ್ರಾಮದ ನಿವಾಸಿ ರಾಜಾ ಆರ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಮೃತ ರಾಜ ಮನೆಗೆ ಕೋಳಿ ಖರೀದಿಸಿ ಹೋಗುತ್ತಿದ್ದಾಗ ಮೂಗೇನಹಳ್ಳಿ ಕ್ರಾಸ್ ಬಳಿ ಅಪಘಾತ ಘಟನೆ ನಡೆದಿದೆ. ಎದುರಿನಿಂದ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಇವರ ಬೈಕ್‌ಗೆ ಡಿಕ್ಕಿ ಹೊಡೆದು ರಾಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಕಸದ ಲಾರಿ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳೀಯರು ಪ್ರತಿಭಟನೆ ನಡೆಸಿ ಶವವನ್ನು ಸ್ಥಳದಿಂದ ಸ್ಥಳಾಂತರಿಸಲು ಪೊಲೀಸರಿಗೆ ಅವಕಾಶ ನೀಡಲಿಲ್ಲ. ಚಿಗುರನಹಳ್ಳಿಯಲ್ಲಿರುವ ಎಂಎಸ್‌ಜಿಪಿ ತ್ಯಾಜ್ಯ ಟೆಕ್ ಪಾರ್ಕ್ ಅನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ತ್ಯಾಜ್ಯ ಪಾರ್ಕ್‌ಗೆ ತೆರಳುವ ಬಿಬಿಎಂಪಿ ಕಸದ ಲಾರಿ ಚಾಲಕರು ವಾಹನಗಳನ್ನು ಅಜಾಗರೂಕತೆಯಿಂದ ಓಡಿಸುತ್ತಾರೆ ಎಂದು ಆರೋಪಿಸಿದರು. ಆದರೆ, ಪೊಲೀಸರು ಸ್ಥಳೀಯರ ಮನವೊಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Post a Comment

Previous Post Next Post