ಮಾಜಿ ಪ್ರಧಾನಿಗಳ ಮನೆಗೆ ನಿರ್ಮಲಾ ಸೀತಾರಾಮನ್ ಭೇಟಿ: ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಹಣಕಾಸು ಸಚಿವೆ


 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

                                ದೇವೇಗೌಡರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

By : Rekha.M
Online Desk

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು. ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು. ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ದೇವೇಗೌಡರನ್ನು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಭೇಟಿ ಮಾಡಿ ಅರೋಗ್ಯ ವಿಚಾರಿಸಿ ಶೀಘ್ರ ಚೇತರಿಸಿಕೊಳ್ಳಿ,ನಿಮ್ಮ ಸೇವೆ ದೇಶಕ್ಕೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ,ಹಾಗು ದೇವೇಗೌಡರ ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಮಂಡಿ ನೋವಿನ ಸಮಸ್ಯೆಯಿಂದ ದೇವೇಗೌಡರು ಬಳಲುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ನಿವಾಸಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಧನ್ಯವಾದ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ನನ್ನ ಮನೆಗೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದರು, ಅವರ ಕಾಳಜಿ ಮತ್ತು ಕಳಕಳಿಗೆ ನಾನು ಆಭಾರಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.


Post a Comment

Previous Post Next Post