ಮಹಾರಾಷ್ಟ್ರ: ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 10 ಮಂದಿ ಸಾವು, 24 ಜನರಿಗೆ ಗಾಯ

 ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಕ್ರವಾರ ರಾತ್ರಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಹತ್ತು ಜನರು ಸಾವನ್ನಪ್ಪಿ, 24 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                 ನಾಸಿಕ್ ನಲ್ಲಿ ಹೊತ್ತಿ ಉರಿದ ಬಸ್

By : Rekha.M
Online Desk

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಕ್ರವಾರ ರಾತ್ರಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಹತ್ತು ಜನರು ಸಾವನ್ನಪ್ಪಿ, 24 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ  ಖಾಸಗಿ ಬಸ್ ಒಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.

ಮುಂಜಾನೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ.  ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ. ಸಾವಿಗೀಡಾದ ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಬಸ್ ಪ್ರಯಾಣಿಕರು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದ್ದು, ವೈದ್ಯರ ಅಧಿಕೃತ ಘೋಷಣೆಗಾಗಿ ಕಾಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.Post a Comment

Previous Post Next Post