ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಪ್ರಕರಣದ ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ!

 ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ.

               ಜ್ಞಾನವಾಪಿ ಮಸೀದಿ

By : Rekha.M
Online Desk

ವಾರಣಾಸಿ: ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ. 

ಇಂದು ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ವಾದವನ್ನು ಆಲಿಸಿದ ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಅಕ್ಟೋಬರ್ 11ರಂದು ಅರ್ಜಿಯ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ.

ವಜುಖಾನದಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ ಸಂಬಂಧಿಸಿದ ವಿಚಾರಣೆಯ ಸಂದರ್ಭದಲ್ಲಿ, ಎರಡೂ ಪಕ್ಷಗಳ ವಕೀಲರು ನ್ಯಾಯಾಲಯದಲ್ಲಿ ಹಾಜರಿದ್ದ ನಂತರ ನ್ಯಾಯಾಲಯದ ಆವರಣದ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಇದೇ ವೇಳೆ ನ್ಯಾಯಾಲಯದಲ್ಲಿ ಬೆಳಗ್ಗೆಯಿಂದಲೇ ಹಿಂದೂ-ಮುಸ್ಲಿಂ ಪಕ್ಷಗಳ ನಡುವೆ ಈ ವಿಚಾರವಾಗಿ ವಾಗ್ವಾದದ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆಯೇ ಎಲ್ಲ ಕಕ್ಷಿದಾರರು ತಮ್ಮ ವಕೀಲರ ಜತೆ ಸಭೆ ನಡೆಸಿ ನ್ಯಾಯಾಲಯದ ಸಂಭವನೀಯ ನಿರ್ಧಾರದ ಕುರಿತು ಚಿಂತನ ಮಂಥನ ನಡೆಸಿದರು. ಅದೇ ಸಮಯದಲ್ಲಿ, ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

    ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ದೊರೆತ ಶಿವಲಿಂಗಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಕಡೆಯವರು ಕಾರಂಜಿ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರೆ. ಮತ್ತೊಂದೆಡೆ ಹಿಂದೂಗಳ ಕಡೆಯವರು ಇದನ್ನು ಶಿವಲಿಂಗ ಎಂದು ಬಣ್ಣಿಸುತ್ತಲೇ ಜ್ಞಾನವಾಪಿ ಮಸೀದಿ ಪ್ರದೇಶದಲ್ಲಿರುವ ಶಿವಲಿಂಗವನ್ನು ಆದಿ ಎಂದು ಕರೆದಿದ್ದಾರೆ.


    Post a Comment

    Previous Post Next Post