ಹೊಸಕೋಟೆ ಬಳಿ ಲಾರಿಗೆ ಡಿಕ್ಕಿ ಹೊಡೆದ ಬಸ್ಸು, ಆಂಧ್ರ ಮೂಲದ ದಂಪತಿ ಸಾವು, 18 ಪ್ರಯಾಣಿಕರಿಗೆ ಗಾಯ

 ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಮೈಲಾಪುರ ಗೇಟ್​ ಬಳಿ ಕಳೆದ ಮಧ್ಯರಾತ್ರಿ ನಡೆದಿದೆ. 

        ಸಾಂದರ್ಭಿಕ ಚಿತ್ರ

By : Rekha.M
Online Desk

ಬೆಂಗಳೂರು: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಮೈಲಾಪುರ ಗೇಟ್​ ಬಳಿ ಕಳೆದ ಮಧ್ಯರಾತ್ರಿ ನಡೆದಿದೆ. 

ಆಂಧ್ರ ಪ್ರದೇಶದ ಬಲಿಜಖಂಡ್ರಿಗದಿಂದ ಬಸ್ಸು ಬೆಂಗಳೂರಿಗೆ ಬರುತ್ತಿತ್ತು. ಕಲ್ಲು ತುಂಬಿದ್ದ ಲಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರ ಮೂಲದ ಗಂಡ-ಹೆಂಡತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಒಟ್ಟು 18 ಮಂದಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿವೆ. ಗಾಯಾಳುಗಳನ್ನು ಹೊಸಕೋಟೆಯ ಖಾಸಗಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 


Post a Comment

Previous Post Next Post