48 ವರ್ಷಗಳಲ್ಲಿ ಇದೇ ಮೊದಲು: ತಮಿಳುನಾಡಿಗೆ ಅತೀ ಹೆಚ್ಚು ನೀರು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ!

 ಹಳೆ ಮೈಸೂರು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳು ಮತ್ತು ಕೆರೆಗಳು ಬಹುತೇಕ ಭರ್ತಿಯಾಗಿದ್ದರಿಂದ ರಾಜ್ಯ ಸರ್ಕಾರ ಈ ಬಾರಿ ತಮಿಳುನಾಡು ರಾಜ್ಯಕ್ಕೆ ಅತೀ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದು, ಇದು ಕಳೆದ 48 ವರ್ಷಗಳಲ್ಲೇ ಅತೀ ಹೆಚ್ಚು ಎಂದು ಹೇಳಲಾಗುತ್ತಿದೆ.

                 ಸಂಗ್ರಹ ಚಿತ್ರ

By : Rekha.M
Online Desk

ಮೈಸೂರು: ಹಳೆ ಮೈಸೂರು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳು ಮತ್ತು ಕೆರೆಗಳು ಬಹುತೇಕ ಭರ್ತಿಯಾಗಿದ್ದರಿಂದ ರಾಜ್ಯ ಸರ್ಕಾರ ಈ ಬಾರಿ ತಮಿಳುನಾಡು ರಾಜ್ಯಕ್ಕೆ ಅತೀ ಹೆಚ್ಚು ನೀರನ್ನು ಬಿಡುಗಡೆ ಮಾಡಿದ್ದು, ಇದು ಕಳೆದ 48 ವರ್ಷಗಳಲ್ಲೇ ಅತೀ ಹೆಚ್ಚು ಎಂದು ಹೇಳಲಾಗುತ್ತಿದೆ. 

ಕಾವೇರಿ ನದಿ ನೀರು ಹಂಚಿಕೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ಅತೀ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದೆ. 

ಕಾವೇರಿ ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ಕರ್ನಾಟಕವು ತಮಿಳುನಾಡಿಗೆ 101 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕು. ಆದರೆ, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿದೆ. ಈ ವರ್ಷದ ಜೂನ್ ಮತ್ತು ಸೆಪ್ಟೆಂಬರ್ ನಡುವೆ ತಮಿಳುನಾಡಿಗೆ 452.5 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. .

ಬಿಳಿಗುಂಡಲು ಗೇಜಿಂಗ್ ಸ್ಟೇಷನ್ ಜೂನ್‌ನಲ್ಲಿ 16.46 ಟಿಎಂಸಿ ಅಡಿ, ಜುಲೈನಲ್ಲಿ 106.93 ಟಿಎಂಸಿ ಅಡಿ, ಆಗಸ್ಟ್‌ನಲ್ಲಿ 223.57 ಟಿಎಂಸಿ ಮತ್ತು ಸೆಪ್ಟೆಂಬರ್‌ನಲ್ಲಿ 105.52 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ. 

ಅಕ್ಟೋಬರ್‌ನಲ್ಲಿಯೂ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮೆಟ್ಟೂರು ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಮೆಟ್ಟೂರು ಜಲಾಶಯ ಈಗ ಬಹುತೇಕ ಭರ್ತಿಯಾಗಿರುವುದರಿಂದ ತಮಿಳುನಾಡಿಗೆ ಹೆಚ್ಚಾಗಿ  ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 

ಕಳೆದ ನಾಲ್ಕು ವರ್ಷಗಳಲ್ಲಿ ತಮಿಳುನಾಡಿಗೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕರ್ನಾಟಕವು 2018-2019ರಲ್ಲಿ 228 ಟಿಎಂಸಿ ಅಡಿ ಹೆಚ್ಚುವರಿ ನೀರು, 2019-2020ರಲ್ಲಿ 97 ಟಿಎಂಸಿ,  2020-2021ರಲ್ಲಿ 34 ಟಿಎಂಸಿ, 2021-2022 ಸೆಪ್ಟೆಂಬರ್‌ವರೆಗೆ 103 ಟಿಎಂಸಿ ಅಡಿ ಹಾಗೂ 275 ಅಡಿ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದೆ. 

67 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ರಾಜ್ಯ ಸರ್ಕಾರವು ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸಲು ಯೋಜಿಸಿದೆ. ಮೆಟ್ಟೂರು ಜಲಾಶಯದಲ್ಲಿ 93.47 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ.

Post a Comment

Previous Post Next Post