ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ: ಅ.6ರಂದು ರಾಹುಲ್ ಗಾಂಧಿಗೆ ಸೋನಿಯಾಗಾಂಧಿ ಸಾಥ್!

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರೂ ಕೂಡ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಲಾಗಿದೆ.

             ಸೋನಿಯಾ ಮತ್ತು ರಾಹುಲ್ ಗಾಂಧಿ

By : Rekha.M
Online Desk

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರೂ ಕೂಡ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಕ್ಟೋಬರ್ 6 ರಂದು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಭಾನುವಾರ ತಿಳಿಸಿವೆ. 

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ಕರ್ನಾಟಕ ಪ್ರವೇಶ ಮಾಡಿದ್ದು, ರಾಜ್ಯದಲ್ಲಿ ಯಾತ್ರೆಯು 21 ದಿನಗಳ ಕಾಲ 511 ಕಿ.ಮೀ. ದೂರ ಸಾಗಲಿದೆ.  

ಅಕ್ಟೋಬರ್ 6 ರಂದು ಕರ್ನಾಟಕ ಯಾತ್ರೆಯ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳಲ್ಲಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿದ್ದಾಗ ಯಾತ್ರೆ ಆರಂಭವಾಗಿತ್ತು. ಅವರು ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು.

ಕರ್ನಾಟಕದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾತ್ರೆಯು ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ ಮತ್ತು ಬಿಜೆಪಿ ಆಡಳಿತದ ರಾಜ್ಯದಲ್ಲಿ ಮೊದಲ ಬಾರಿಗೆ ಯಾತ್ರೆ ಹಾದುಹೋಗುತ್ತಿದೆ.
 


Post a Comment

Previous Post Next Post