ಅತ್ಯಾಚಾರಿಗಳ ಪರವಾಗಿದ್ದಾರೆ ಪ್ರಧಾನಿ ಮೋದಿ: ರಾಹುಲ್ ಗಾಂಧಿ

 ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರವಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

                        ರಾಹುಲ್ ಗಾಂಧಿ

By : Rekha.M
Online Desk

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರವಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. 

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದ ಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೆಂಪುಕೋಟೆಯಿಂದ, ಮಹಿಳೆಯರನ್ನು ಗೌರವಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ. ಆದರೆ, ವಾಸ್ತವದಲ್ಲಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಟೀಕಿಸಿದ್ದಾರೆ. 

ಪ್ರಧಾನ ಮಂತ್ರಿಗಳ ಭರವಸೆ ಮತ್ತು ಉದ್ದೇಶಗಳ ನಡುವೆ ಇರುವ ವ್ಯತ್ಯಾಸ ಸ್ಪಷ್ಟವಾಗಿದೆ. ಪ್ರಧಾನಿಯವರೇ ಮಹಿಳೆಯರಿಗೆ ಮೋಸ ಮಾಡಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ. 

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳನ್ನು ಅವಧಿಗೂ ಮುನ್ನವೇ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಗುಜರಾತ್‌ನಲ್ಲಿನ ಬಿಜೆಪಿ ಸರ್ಕಾರ, ಶಿಫಾರಸು ಸಲ್ಲಿಸಿತ್ತು. ಅದಕ್ಕೆ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ 2 ವಾರಕ್ಕೂ ಮುನ್ನವೇ ಅಂಗೀಕಾರ ನೀಡಿತ್ತು ಎನ್ನುವುದು ಬಹಿರಂಗವಾಗಿದೆ. ಈ ಕುರಿತು ರಾಹುಲ್ ಗಾಂಧಿಯವರು ಕಿಡಿಕಾರಿದ್ದಾರೆ. Post a Comment

Previous Post Next Post