ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

 ಕಾಂಗ್ರೆಸ್ ಅಧ್ಯಕ್ಷ ಸ್ಥಾನ(Congress president poll)ಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

                  ಮಲ್ಲಿಕಾರ್ಜುನ ಖರ್ಗೆ

By : Rekha.M
Online Desk

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನ(Congress president poll)ಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಒಬ್ಬ ನಾಯಕ-ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ತಿಂಗಳ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆಯವರ ಗೆಲುವು ಬಹುತೇಕವಾಗಿದೆ. ಅವರು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸ್ಪರ್ಧಿಯಾಗಿ ಕೇರಳದ ಸಂಸದ ಶಶಿ ತರೂರು ಇದ್ದಾರೆ. Post a Comment

Previous Post Next Post