ನಮ್ಮ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ವಿರುದ್ಧ ಪ್ರಕರಣ ರದ್ದುಮಾಡಿಲ್ಲ: ರಾಮಲಿಂಗಾ ರೆಡ್ಡಿ

 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿ PFI ಮೇಲಿನ ಒಂದೇ ಒಂದು ಪ್ರಕರಣವನ್ನು ಹಿಂದೆ ಪಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

                ರಾಮಲಿಂಗಾ ರೆಡ್ಡಿ

By : Rekha.M
Online Desk

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿ PFI ಮೇಲಿನ ಒಂದೇ ಒಂದು ಪ್ರಕರಣವನ್ನು ಹಿಂದೆ ಪಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ, ಆರ್ ಅಶೋಕ್ ಸೇರಿದಂತೆ ಹಲವು ಸಚಿವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸುಖ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಇವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

2013-14 ರಿಂದ 2022 ರ ತನಕ ರಾಜ್ಯದಲ್ಲಿ ವಿವಿಧ ಪ್ರಕರಣಗಳಡಿ ಸರ್ಕಾರಗಳು ಹಿಂಪಡೆದ ಪ್ರಕರಣಗಳ ಕುರಿತು ಮಾಹಿತಿ ಹಕ್ಕು ಅಧಿನಿಯಮದ ಅಡಿ ಸರ್ಕಾರವೇ ಉತ್ತರ ನೀಡಿದ್ದು ಅದರಲ್ಲಿ ಒಟ್ಟಾರೆ 367 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಒಂದೇ ಒಂದು ಪ್ರಕರಣವು ಪಿಎಫ್‌ಐಗೆ ಸಂಬಂಧಿಸಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಪಿಎಫ್ ಐ ಬೆಳೆಯಲು ಸಹಕಾರ ನೀಡಿದ್ದಾರೆ ಎನ್ನುವ ರಾಜ್ಯ ಬಿಜೆಪಿ ನಾಯಕರ ಹೇಳಿಕೆ ಅರ್ಥವಿಲ್ಲದ್ದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಸೇರಿದಂತೆ ಸಚಿವರು ಶಾಸಕರು ಮತ್ತು ಬಿಜೆಪಿ ನಾಯಕರು ಅರ್ಥವಿಲ್ಲದ ಆರೋಪ ಮಾಡುತ್ತಾ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ ಐ ಪ್ರಕರಣ ಹಿಂಪಡೆದಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ.

367 ಒಟ್ಟು ಹಿಂಪಡೆದ ಪ್ರಕರಣಗಳ ಪೈಕಿ ಸಂಘ ಪರಿವಾರಕ್ಕೆ ಸೇರಿದ ೪೪ ಪ್ರಕರಣಗಳು, ಕೋಮು ಗಲಭೆ ಸೇರಿದ ಎಂಟು ಪ್ರಕರಣಗಳು ಸೇರಿವೆ. ಬಿಜೆಪಿ ನಾಯಕರು ತಮಗೆ ಅನುಕೂಲವಾಗುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿದ್ದು ಆರೋಪ ಮಾಡುವಾಗ ಮುಖ್ಯಮಂತ್ರಿ ಸೇರಿ ಸಚಿವರು ಎಚ್ಚರಿಕೆಯಿಂದ ಮಾತನಾಡಬೇಕು ಇಲ್ಲದಿದ್ದರೆ ತಿರುಗುಬಾಣವಾಗಲಿದೆ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನಾಯಕರು ಉತ್ತರ ಕುಮಾರನಂತೆ ಪೌರಸ ತೋರಲು ಮುಂದಾಗಿದ್ದಾರೆ ಆರೋಪ ಮಾಡುವಾಗ ತಮ್ಮನ ಒಮ್ಮೆ ನೋಡಿಕೊಳ್ಳಬೇಕು ಎಂದು ಅವರು ತಿರುಗೇಟು ನೀಡಿದರು.


Post a Comment

Previous Post Next Post