ಖಾಸಗಿ ಬಸ್ ನಿಲ್ದಾಣದಲ್ಲಿ ಕೊಲೆ

 

ತುಮಕೂರು : ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಖಲಾಗಿದೆ

ಕೊಲೆಯಾದ ದುರ್ದೈವಿಯನ್ನು ಮುಬಾರಕ್ ಪಾಷಾ. ಈತ ನಗರದ ಜಿಸಿಆರ್ ಕಾಲೋನಿ ನಿವಾಸಿಯಾಗಿದ್ದು , ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡುತ್ತಿದ್ದ.

ಗುರುವಾರ ತಡರಾತ್ರಿ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮುಬಾರಕ್ ಪಾಷಾ ಮತ್ತು ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post