ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಿಹಾರದ ದರ್ಭಾಂಗದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮುಖೇಶ್ ಅಂಬಾನಿಮುಂಬೈ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಿಹಾರದ ದರ್ಭಾಂಗದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಕೇಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಆರೋಪಿಯೊಂದಿಗೆ ಪೊಲೀಸ್ ತಂಡ ಮುಂಬೈಗೆ ಮರಳುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆಗಳ ಘಟನೆಯಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಮುಂಬೈ ಪೊಲೀಸರ ತಂಡವು ಬಿಹಾರ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಬಿಹಾರದ ದರ್ಭಾಂಗಾದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ಡಿಸಿಪಿ (ವಲಯ II) ನೀಲೋತ್ಪಾಲ್ ಅವರು ತಿಳಿಸಿದ್ದಾರೆ.
ಮಿಶ್ರಾ ಅವರನ್ನು ಐಪಿಸಿ ಸೆಕ್ಷನ್ 506 (2) ಮತ್ತು 507 ಅಡಿಯಲ್ಲಿ ಬಂಧಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
Post a Comment