ಭಾರೀ ಮಳೆಗೆ ಮನೆ ಗೋಡೆ ಕುಸಿತ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಮಗು ಸೇರಿ ಮೂವರು ಸಾವು

 ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

                                 ಸಾಂದರ್ಭಿಕ ಚಿತ್ರ

By : Rekha.M
Online Desk

ರಾಯಚೂರು : ದೀಪಾವಳಿ ಹಬ್ಬ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಅನಾಹುತ ಮುಂದುವರಿದಿದೆ.

ಭಾರೀ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿದ್ದು ಅವರನ್ನು 45 ವರ್ಷದ ಪರಮೇಶ್ 39 ವರ್ಷದ ಜಯಮ್ಮ ಹಾಗೂ ದಂಪತಿ ಪುತ್ರ 5 ವರ್ಷದ ಭರತ್ ಮೃತಪಟ್ಟ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಯಚೂರು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. 


Post a Comment

Previous Post Next Post