ಐಸಿಯುನಲ್ಲಿ ಮುಲಾಯಂ ಸಿಂಗ್ ಯಾದವ್, ಆರೋಗ್ಯ ಪರಿಸ್ಥಿತಿ ಗಂಭೀರ- ಆಸ್ಪತ್ರೆ ಹೇಳಿಕೆ

 ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇಲ್ಲಿನ  ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಗುರುವಾರ ಹೇಳಿದೆ.

          ಮುಲಾಯಂ ಸಿಂಗ್ ಯಾದವ್

By : Rekha.M
Online Desk

ಗುರುಗ್ರಾಮ: ಸಮಾಜವಾದಿ ಪಕ್ಷ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇಲ್ಲಿನ  ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಗುರುವಾರ ಹೇಳಿದೆ.

82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರಿಗೆ ಸಮಗ್ರ ತಜ್ಞರ ತಂಡದಿಂದ ಜೀವ ರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
 


Post a Comment

Previous Post Next Post