ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರ ಹಲ್ಲೆ ಆರೋಪ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

 ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುರ್ವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್‌ಪಿ ಎನ್.ಯತೀಶ್‌ ಮೊಂಡುತನ ಪ್ರದರ್ಶನ ಮಾಡಿರುವುದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

                       ಸಿಎಂ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿರುವುದು

By : Rekha.M
Online Desk

ಮಂಡ್ಯ: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುರ್ವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್‌ಪಿ ಎನ್.ಯತೀಶ್‌ ಮೊಂಡುತನ ಪ್ರದರ್ಶನ ಮಾಡಿರುವುದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಭದ್ರತೆ ಒಧಗಿಸುವ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ. ಪಾದಯಾತ್ರೆಯ ವೇಳೆ ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸುವ ಬದಲು ಪೊಲೀಸರು ಮಾಧ್ಯಮದವರ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರದ ಜಕ್ಕನಹಳ್ಳಿ ಕ್ರಾಸ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಮಾಧ್ಯಮ ಸಿಬ್ಬಂದಿ ಮೇಲೆ ದುರ್ವರ್ತನೆ ತೋರಿದ್ದಾರೆ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದು ಮಂಡ್ಯ SP ಯತೀಶ್‌ ನಡೆಗೆ ಮಾಧ್ಯಮ ಪ್ರತಿನಿಧಿಗಳು ಗರಂ ಆಗಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿದ್ದೇನು? ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಯಾರ ತಪ್ಪಿದೆ ಎಂದು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. 


Post a Comment

Previous Post Next Post