ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ: ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ; ಯುವಕನ ಮೇಲೆ ಹಲ್ಲೆ

 ಹಿಂದೂ ಕಾರ್ಯಕರ್ತ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಜೊತೆಗೆ ಓರ್ವ ಯುವಕನ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಮತ್ತೆ ಪ್ರಕ್ಷುಬ್ದವಾತಾವರಣ ನಿರ್ಮಾಣವಾಗಿದೆ.

                     ಶಿವಮೊಗ್ಗದಲ್ಲಿ ಪೊಲೀಸರ ಪರಿಶೀಲನೆ

By : Rekha.M
Online Desk

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಜೊತೆಗೆ ಓರ್ವ ಯುವಕನ ಮೇಲೆಯೂ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಮತ್ತೆ ಪ್ರಕ್ಷುಬ್ದವಾತಾವರಣ ನಿರ್ಮಾಣವಾಗಿದೆ.

ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡುತ್ತಿದ್ದ ಗುಂಪು ಸೀಗೆಹಟ್ಟಿಯ ಹರ್ಷನ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷ‌‌ನ ಸಹೋದರಿ ಅಶ್ವಿನಿ ಹಾಗೂ ಕುಟುಂಬದವರಿಗೆ ಬೆದರಿಕೆ ಹಾಕಿ, ಬಳಿಕ ಬೈಕನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಯುವಕರ ಗುಂಪು ದುಷ್ಕರ್ಮಿಗಳನ್ನು ಹಿಂಬಾಲಿಸಿದ್ದಾರೆ. ಪರಾರಿಯಾಗುವ ವೇಳೆ ಕಿಡಿಗೇಡಿಗಳು ಭರಮಪ್ಪ ನಗರದಲ್ಲಿ ಪ್ರಕಾಶ್ ಎಂಬ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಕಾಲ್ಕಿತ್ತಿದ್ದಾರೆ

ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್, ಯುವಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಚೇತರಿಸಿಕೊಂಡಿದ್ದಾನೆ. ಬೈಕ್ ನಲ್ಲಿ ಬಂದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಘೋಷಣೆಗಳನ್ನ ಕೂಗಿ ವಾಪಸ್ ಮರಳುವಾಗ ಯುವಕನಿಗೆ ಕಲ್ಲಿನಿಂದ ಹೊಡೆದು ತೆರಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ ಎಂದರು.

ಹಿಜಾಬ್ ನಂತರ ಉಂಟಾದ ಕಲಹ ಹರ್ಷನ ಕೊಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬಳಿಕ ಶಾಂತ ಸ್ಥಿತಿಗೆ ಮರಳಿದ್ದ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪೊಂದು ಮೃತ ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಬೆದರಿಕೆ‌ ಹಾಕಿದ್ದಾರೆ.


Post a Comment

Previous Post Next Post