ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ: ಶಿವಮೂರ್ತಿ ಸ್ವಾಮೀಜಿ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ಎಫ್ಐಆರ್!

 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್‌ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

           ಚಿತ್ರದುರ್ಗದ ಮುರುಘಾ ಶರಣರು

By : Rekha.M
Online Desk

ಮೈಸೂರು:  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್‌ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಮಠದ ವಿದ್ಯಾರ್ಥಿ ನಿಲಯದಲ್ಲಿದ್ದ ಬಾಲಕಿಯು ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದಾಳೆ. ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಎದುರು ಪೋಷಕರೊಂದಿಗೆ ಹಾಜರಾದ ಬಾಲಕಿಯು, ಶರಣರಿಂದ ತನಗಾಗಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಳು.

ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಪ್ರಕಾರ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ಖಚಿತ ಪಡಿಸಿವೆ. ಮುರುಘಾ ಶರಣರು ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.  

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.


Post a Comment

Previous Post Next Post