ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

 ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಮಧ್ಯಾಹ್ನ ಐತಿಹಾಸಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

            ಸೋನಿಯಾ ಗಾಂಧಿ

By : Rekha.M

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಮಧ್ಯಾಹ್ನ ಐತಿಹಾಸಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಅಕ್ಟೋಬರ್ 04 ಮತ್ತು 05 ರಂದು ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆ ಯಾತ್ರೆಗೆ ಎರಡು ದಿನಗಳ ವಿರಾಮದ ನಂತರ ಯಾತ್ರೆ ಪುನರಾರಂಭವಾದಾಗ ಅವರು ಗುರುವಾರ ಬೆಳಿಗ್ಗೆ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಹವಾಮಾನ ವೈಪರಿತ್ಯದಿಂದಾಗಿ ಕೊಡಗಿಗೆ ತೆರಳದ ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರು ಚುನಾವಣಾ ಸಮಯದಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡಿರಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಪಕ್ಷದ ಸಾರ್ವಜನಿಕ ಸಮಾರಂಭದಲ್ಲಿ ಅವರು ಬಹಳ ಸಮಯದ ನಂತರ ಭಾಗವಹಿಸಲಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು ಐದು ತಿಂಗಳ ಪ್ರಯಾಣದ 26ನೇ ದಿನವನ್ನು ಪ್ರವೇಶಿಸಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಪೂರ್ಣ 3,570 ಕಿಮೀ ಪಾದಯಾತ್ರೆಯನ್ನು ಕೈಗೊಳ್ಳಲಿದ್ದಾರೆ.


Post a Comment

Previous Post Next Post