ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ: ಗಣ್ಯರ ಸಂತಾಪ

 ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿಯವರು ಇಂದು ಶುಕ್ರವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

                           ಮಾಜಿ ಸಚಿವ ಜಬ್ಬಾರ್ ಖಾನ್

By : Rekha.M

Online Desk


ಹುಬ್ಬಳ್ಳಿ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿಯವರು ಇಂದು ಶುಕ್ರವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಬ್ಬಾರ್ ಖಾನ್ ಹೊನ್ನಳ್ಳಿಯವರು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ.

ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಸಾಕಷ್ಟು ರಾಜಕೀಯ ಅನುಭವ ಪಡೆದಿದ್ದ ಹಿರಿಯ ರಾಜಕಾರಣಿಯಾಗಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ಅವಳಿ‌ನಗರದ ಜನಪ್ರತಿನಿಧಿಗಳು ಕಂಬನಿ‌ ಮಿಡಿದಿದ್ದಾರೆ.


    Post a Comment

    Previous Post Next Post