ನೇಮಕಾತಿ 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

 ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

             ಸಂಗ್ರಹ ಚಿತ್ರ
By : Rekha.M
Online Desk

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿ ಇಲ್ಲಿದೆ.

ಹುದ್ದೆ: ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ.ಹೆಚ್.ಓ)

ಕರ್ತವ್ಯ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ಖಾಲಿಯಿರುವ ಹುದ್ದೆಗಳ ಸಂಖ್ಯೆ: 1048

ಶೈಕ್ಷಣಿಕ ಅರ್ಹತೆ: 
ಕನಿಷ್ಠ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿಂದ ಸಮಾನಾಂತರ ವಿದ್ಯಾರ್ಹತೆಯನ್ನು ಪಡೆದ ನೋಂದಾಯಿತ ಶುಶ್ರೂಷಕರಾಗಿರಬೇಕು.

ವಯೋಮಿತಿ:
• ಪ. ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ.

ವೇತನ ಶ್ರೇಣಿ: 
ಮಾಸಿಕ ರೂ. 22,000 ರಿಂದ ರೂ. 24,200 ವೇತನ
ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ. 8,000 ವರೆಗೆ ನೀಡಲಾಗುವುದು.

ಆಯ್ಕೆ ವಿಧಾನ: ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: 
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆ (Notification) ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ ವಿವರ:
• ಪ. ಜಾತಿ, ಪ. ಪಂಗಡದ ಅಭ್ಯರ್ಥಿಗಳು ರೂ. 255
• ಉಳಿದ ಅಭ್ಯರ್ಥಿಗಳು ರೂ. 510

ಶುಲ್ಕ ಪಾವತಿ ವಿಧಾನ: 
ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 25, 2022
ಪ್ರವೇಶಪತ್ರ ಪ್ರಕಟ ದಿನಾಂಕ: ಡಿಸೆಂಬರ್ 05, 2022

ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ
https://ggle.io/5O6w

ಅಧಿಕೃತ ಸುತ್ತೋಲೆ ಓದಲು ಇಲ್ಲಿ ಕ್ಲಿಕ್ ಮಾಡಿ
https://ggle.io/5O6x

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
https://ggle.io/5O73

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/FqWN


Post a Comment

Previous Post Next Post