ದೇಶ ಹಾಳು ಮಾಡಿದ್ದು ವೇದ-ಉಪನಿಷತ್ತು: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ; ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್

 ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ. ಬ್ರಾಹ್ಮಣ ಸಮುದಾಯದ ವಿರುದ್ಧ ಪ. ಮಲ್ಲೇಶ್ ಅವರು ಹೇಳಿಕೆ ನೀಡಿರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

      ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಹಾಗೂ                                                                         ಸದಸ್ಯರು

By : Rekha.M
Online Desk

ಬೆಂಗಳೂರು: ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದೆ.

ಬ್ರಾಹ್ಮಣ ಸಮುದಾಯದ ವಿರುದ್ಧ ಪ. ಮಲ್ಲೇಶ್ ಅವರು ಹೇಳಿಕೆ ನೀಡಿರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

ಈ ಬೆಳವಣಿಗೆಯಿಂದ ಆತಂತಗೊಂಡಿರುವ ಕಾಂಗ್ರೆಸ್, ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಸ್ಪಷ್ಟನೆ ನೀಡುವಂತೆಯೂ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ.

'ನಾನು ಎಲ್ಲ ಸಮುದಾಯಗಳನ್ನು ಸಮಾನವಾಗಿ ಗೌರವಿಸುತ್ತೇನೆ ಮತ್ತು ಯಾರನ್ನೂ ಅವಮಾನಿಸುವಲ್ಲಿ ನಾನು ಎಂದಿಗೂ ತೊಡಗಿಲ್ಲ ಹಾಗೂ ಮುಂದೆಯೂ ತೊಡಗುವುದಿಲ್ಲ ಎಂದು ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡುವಂತೆ ಮತ್ತು ಮುಂದುವರಿಸದಂತೆ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಹಾಗೂ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರನ್ನು ಕೋರಿದರು.

ಸಿದ್ದರಾಮಯ್ಯ ಅವರ ಆಪ್ತರಾಗಿರುವ ಪ.ಮಲ್ಲೇಶ್ ಕೂಡ, ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲಾ ಬ್ರಾಹ್ಮಣರ ಸಂಘವು ದೂರು ನೀಡಿದ್ದು, 'ಐಪಿಸಿ ಸೆಕ್ಷನ್ 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 295 (ಧರ್ಮ ಅಥವಾ ಯಾವುದೇ ವರ್ಗವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು), 295 (ಎ) (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಅಡಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಒತ್ತಾಯಿಸಿದೆ.

ಮೈಸೂರಿನಲ್ಲಿ ‘ಸಿದ್ದರಾಮಯ್ಯ@75’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮಲ್ಲೇಶ್, 'ಯಾವುದೇ ಸಂದರ್ಭದಲ್ಲೂ ಜನರು ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯವನ್ನು ನಂಬಬಾರದು. ವೇದಗಳು ಮತ್ತು ಉಪನಿಷತ್ತುಗಳು ಈ ದೇಶವನ್ನು ನಾಶಪಡಿಸಿವೆ. ಜನರು ಬುದ್ಧನನ್ನು ಅನುಸರಿಸಬೇಕು, ನಾವೆಲ್ಲರೂ ಬುದ್ಧನನ್ನು ನಮ್ಮ ಪರವಾಗಿ ಹೊಂದಿದ್ದೇವೆ' ಎಂದು ಹೇಳಿದ್ದರು.

ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇ 50 ರಿಂದ 60ಕ್ಕೆ ಹೆಚ್ಚಿಸುವ ಹಿಂದೆ ಬ್ರಾಹ್ಮಣರು ಇದ್ದಾರೆ ಎಂದು ಅವರು ಹೇಳಿದರು.

ಈ ವೇಳೆ ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಅವರು ಈ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು.

ವಿಷಯ ವಿವಾದಕ್ಕೆ ತಿರುಗಿದ ಬಳಿಕ, ಸಿದ್ದರಾಮಯ್ಯ ಅವರು ವೇದಿಕೆಯಲ್ಲಿದ್ದರೂ ಕೂಡ ಪ.ಮಲ್ಲೇಶ್ ಅವರು ಹೇಳಿದ್ದನ್ನು ಕೇಳಿಸಿಕೊಂಡಿಲ್ಲ ಎಂದು ಸಮರ್ಥಿಸಿಕೊಂಡರು.

Post a Comment

Previous Post Next Post