'ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಬೇಡಿ': ಹಿಂದೂ ಸಂಘಟನೆಗಳಿಂದ ಅಭಿಯಾನ

 ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ.

                    ಕರಾವಳಿ ಭಾಗದ ಪುತ್ತೂರಿನಲ್ಲಿ ಕಂಡುಬಂದ ಲವ್ ಜಿಹಾದ್ ವಿರುದ್ಧದ ಅಭಿಯಾನ ಪೋಸ್ಟರ್

By : Rekha.M
Online Desk

ಮಂಗಳೂರು/ಬೆಂಗಳೂರು: ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ.

ಧರ್ಮ ದಂಗಲ್, ಹಿಜಾಬ್ ಬಳಿಕ ಲವ್ ಜಿಹಾದ್ ಸದ್ದು ಮಾಡುತ್ತಿದೆ. ಹಿಂದೂ ಯುವತಿಯರು ಮುಸ್ಲಿಂ ಯುವಕರ ಮೋಸಕ್ಕೆ ಬಲಿಯಾಗಬೇಡಿ ಎಂದು ಜಾಗೃತಿ ತಿಳಿಸುವ, ದೆಹಲಿಯಲ್ಲಿ ಶ್ರದ್ಧಾಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಅಫ್ತಾಬ್ ನ ಫೋಟೋ ಹಾಕಿ ಅಲ್ಲಲ್ಲಿ ಪೋಸ್ಟರ್ ಅಂಟಿಸಲಾಗುತ್ತಿದೆ.

ರಾಜ್ಯಾದ್ಯಂತ ಅಭಿಯಾನ: ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನಿಗೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿ ಡಿ.11ರಿಂದ 17ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಪುತ್ತೂರು ನಗರದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಯಾಗಬೇಕು ಎಂದು ಹಿಂದೂಪರ ಸಂಘಟನೆಗಳ ಪೋಸ್ಟರ್ ಗಳು ರಾರಾಜಿಸುತ್ತಿವೆ.

ಅಫ್ತಾಬ್ ಶ್ರದ್ಧಾಳನ್ನು ಕೊಂದು 35 ತುಂಡುಗಳಾಗಿ ಕತ್ತರಿಸಲು ಲವ್ ಜಿಹಾದ್ ಕಾರಣ ಎಂದು ಪೋಸ್ಟರ್ ಹೇಳುತ್ತದೆ.

ಲವ್ ಜಿಹಾದ್ ವಿರುದ್ಧ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿದ್ದಾರೆ. ಮುಸ್ಲಿಂ ಯುವಕರ ಮೋಸದಾಟಕ್ಕೆ ಹಿಂದೂ ಯುವತಿಯರು ಬಲಿಯಾಗಬೇಡಿ ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ಶ್ರದ್ಧಾ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಮಂಗಳೂರಿನ ಹುಡುಗಿ ಆಶಾ ತನ್ನ ಹೆಸರನ್ನು ಆಯೇಶಾ ಎಂದು ಬದಲಾಯಿಸಿಕೊಂಡು ಭಯೋತ್ಪಾದಕಳಾದಳು. ದೇಶದಲ್ಲಿ ಲವ್ ಜಿಹಾದ್ ನ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹಿಂದೂ ಯುವತಿಯರು ಇದರಲ್ಲಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ.  ಹಿಂದೂ ಯುವತಿಯರು ಮತ್ತು ಮಹಿಳೆಯರನ್ನು ಉಳಿಸಲು, ಉತ್ತರ ಪ್ರದೇಶದಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ತರಬೇಕೆಂದು ಒತ್ತಾಯಿಸುತ್ತೇವೆ ಎಂದರು.

Post a Comment

Previous Post Next Post