ದರ್ಗಾದ ಒಂದು ಭಾಗ ಕೆಡವಲು ಹುಬ್ಬಳ್ಳಿ ಮಹಾನಗರ ಪಾಲಿಕೆ ನಿರ್ಧಾರ: ಮುಸ್ಲಿಂ ಸಂಘಟನೆಗಳಿಂದ ವಿರೋಧ, ಸ್ಥಳದಲ್ಲಿ ಬಿಗುವಿನ ವಾತಾವರಣ, ಸೆಕ್ಷನ್ 144 ಜಾರಿ

 ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ 144 ಹೇರಲಾಗಿದೆ. 

                ಸ್ಥಳದಲ್ಲಿ ಪೊಲೀಸರ ನಿಯೋಜನೆ

By :Rekha.M
Online Desk

ಹುಬ್ಬಳ್ಳಿ: ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ 144 ಹೇರಲಾಗಿದೆ. 

ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ಕೆಡವಲಾಗುತ್ತಿದ್ದು ನಗರದಲ್ಲಿ ಇಂದು ಉದ್ವಿಗ್ನ ವಾತಾವರಣ ಉಂಟಾಗಿದೆ. ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಂಬೆಳಿಗ್ಗೆ ಆರಂಭವಾಯಿತು. ರಸ್ತೆ ಅಗಲೀಕರಣ ಹಿನ್ನೆಲೆ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ.

ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿದ್ದು, ಹುಬ್ಬಳ್ಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹುಬ್ಬಳ್ಳಿ - ಧಾರವಾಡ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದೆ. ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮುಸ್ಲಿಮರ ಗುಂಪು ಆಕ್ಷೇಪಿಸಿದ ನಂತರ ಉದ್ವಿಗ್ನತೆ ಉಂಟಾಗಿದೆ.

ಇತ್ತೀಚೆಗೆ, ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ತೆಗೆದುಹಾಕಿತು. ದರ್ಗಾ ಉಸ್ತುವಾರಿಗಳು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು,  ಶಾಂತಿ ಕಾಪಾಡುವಂತೆ ಮತ್ತು ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. 

Post a Comment

Previous Post Next Post