ಬೆಂಗಳೂರು ವಿ.ವಿಯ ಅಂತಿಮ ಬಿ.ಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ಕುರಿತ ಪಾಠ ಅಳವಡಿಕೆ

 ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.

               ಪುನೀತ್ ರಾಜ್ ಕುಮಾರ್ (ಸಂಗ್ರಹ ಚಿತ್ರ)

By : Rekha.M
Online Desk

ಬೆಂಗಳೂರು: ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.

ಈ ನಿಟ್ಟಿನಲ್ಲಿ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಇದೀಗ ಬೆಂಗಳೂರು ವಿಶ್ವವಿದ್ಯಾಲಯ ಈಗ 3ನೇ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪಠ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಪಟ್ಟ ಪಠ್ಯವೊಂದನ್ನು ಅಳವಡಿಸುತ್ತಿದೆ. ಈ ಮೂಲಕ ಕನ್ನಡ ನಾಡಿನ ನಟನೊಬ್ಬನಿಗೆ ಗೌರವ ಸಂದಿದೆ.
Post a Comment

Previous Post Next Post