ಬಾಗಲಕೋಟೆ: ತಂದೆ ಕೊಂದು ದೇಹವನ್ನು 'ಪೀಸ್ ಪೀಸ್' ಮಾಡಿ ಬೋರ್​ವೆಲ್​ಗೆ ಹಾಕಿದ ಮಗ; ಬೆಚ್ಚಿ ಬಿದ್ದ ಕರ್ನಾಟಕ!

 ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

                        ಕೊಲೆಯಾದ ಪರಶುರಾಮ ಮತ್ತು ಆತನ ಮಗ ವಿಠಲ ಕುಳಲಿ

By : Rekha.M
Online Desk

ಬಾಗಲಕೋಟೆ:  ಮುಂಬೈ ಯುವತಿ ಶ್ರದ್ಧಾಳ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲಿ ಇಂತಹದ್ದೇ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ.

ಪರಶುರಾಮ ಕುಳಲಿ (54) ಎಂಬವರು ನಿತ್ಯ ಕುಡಿದು ಬಂದು ಮನೆಯಲ್ಲಿ ಮಗನಿಗೆ ಬೈಯುವುದು, ಹೊಡೆಯುವುದು ಮಾಡುತ್ತಿದ್ದನು. ಇದರಿಂದ ರೋಸಿ ಹೋಗಿದ್ದ ಮಗ ವಿಠ್ಠಲ ಕುಳಲಿ (20) ತಂದೆಯನ್ನೇ ರೋಡ್​ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಂದಿದ್ದಾನೆ.

ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಎಂದು ಮಹಿಳೆಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಮಗನನ್ನ ವಶಕ್ಕೆ ಪಡೆದು ತನಿಖೆ ಶುರು ಮಾಡುತ್ತಿದ್ದಂತೆ ಘೋರ ರಹಸ್ಯ ಬಯಲಾಗಿದೆ.

ತಂದೆಯನ್ನು ಕೊಂದ ನಂತರ ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಕೊಳವೆ ಬಾವಿಗೆ ಹಾಕಲು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ತಮ್ಮ ಹೊಲಕ್ಕೆ ಕೊಂಡೊಯ್ದಿದ್ದಾನೆ. ತಂದೆಯ ಮೃತದೇಹವನ್ನು ಕೊಳವೆ ಬಾವಿಗೆ ಹಾಕುವಾಗ ದೇಹ ಅದರೊಳಗೆ ಹೋಗದಿದ್ದಾಗ ಮಗ ವಿಠಲ, ದೇಹವನ್ನು 30 ತುಂಡುಗಳನ್ನಾಗಿ ಮಾಡಿ ಬೋರ್​ವೆಲ್​ಗೆ ಹಾಕಿ ಮನೆಗೆ ವಾಪಸ್ ಆಗಿದ್ದಾನೆ.

ಸ್ಥಳದಲ್ಲಿ ಮೃತದೇಹ ಪತ್ತೆ ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ನಡೆಯುತ್ತಿದ್ದು, ಶವದ ತುಂಡುಗಳು ಪತ್ತೆಯಾಗುತ್ತಿವೆ. . ಜೆಸಿಬಿಯಿಂದ ಕೊಳವೆಬಾವಿ ಸುತ್ತ ಅಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಒಂದೆರಡು ತುಂಡುಗಳು ಪತ್ತೆಯಾಗಿವೆ. ಮಗನನ್ನು ಪೊಲೀಸರು ಬಂಧಿದ್ದಾರೆ.


Post a Comment

Previous Post Next Post