ಮಂಗಳೂರು ಸ್ಫೋಟ ಪ್ರಕರಣ: ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರ

 ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಗುರುವಾರ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರಿಸಲಾಗಿದೆ.

                ಸಂಗ್ರಹ ಚಿತ್ರ

By : Rekha.M
Online Desk

ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಗುರುವಾರ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರಿಸಲಾಗಿದೆ.

ಗುರುವಾರ ಬೆಳಗ್ಗೆ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈಗಾಗಲೇ ಮಂಗಳೂರಿಗೆ ಆಗಮಿಸಿರುವ ಎನ್ಐಎ ಅಧಿಕಾರಿಗಳ ತಂಡ ಗುರುವ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಂಡಿದೆ.

ಈ ನಡುವೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸುವ ಮುನ್ನಾ ಮಂಗಳೂರು ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿ, ಮಹತ್ವದ ಮಾಹಿತಿ ಕಲೆ ಹಾಕಿದರು.

ಎನ್ಐಎ ಹಸ್ತಾಂತರಿಸುವುದಕ್ಕೂ ಮೊದಲು, ಶಾರಿಕ್‌ಗೆ ಚಿಕಿತ್ಸೆ ನೀಡುತ್ತಿರುವ ಫ್ರಾ ಮುಲ್ಲರ್ಸ್ ಆಸ್ಪತ್ರೆಯ ವೈದ್ಯರಿಂದ ಆರೋಪಿಯನ್ನು ವಿಚಾರಣೆ ನಡೆಸಲು ಒಪ್ಪಿಗೆ ಪಡೆಯಲಾಗಿತ್ತು. ಆರೋಪಿಗ 100 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಹಾಕಿ ಉತ್ತರ ಪಡೆಯಲಾಗಿದೆ. ಶಾರೀಕ್'ಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ವೈದ್ಯರು ಆರೋಪಿಗೆ ವಿಶ್ರಾಂತಿ ನೀಡುವಂತೆ ಸೂಚಿಸಿದ್ದಾರೆ. ಸುಟ್ಟ ಗಾಯಗಳು ಹೆಚ್ಚಾಗಿ ಗಂಭೀರವಾದ ದ್ವಿತೀಯಕ ಸೋಂಕುಗಳಿಗೆ ಕಾರಣವಾಗುವುದರಿಂದ ಈಗ ಅವನನ್ನು ಹೆಚ್ಚು ಒತ್ತಾಯಿಸಲು ಸಾಧ್ಯವಿಲ್ಲ ಶಶಿಕುಮಾರ್ ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ವೆಂಟಿಲೇಟರ್‌ನಿಂದ ಹೊರಗಿದ್ದಾರೆ. ಅವರನ್ನು ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರನ್ನು ವೈದ್ಯರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಎನ್‌ಐಎ ದಾಖಲಿಸಿರುವ ಎಫ್‌ಐಆರ್‌ನಲ್ಲಿ, 5-ಲೀಟರ್ ಪ್ರೆಶರ್ ಕುಕ್ಕರ್, 3 ಒಂಬತ್ತು ವೋಲ್ಟ್ ಬ್ಯಾಟರಿಗಳು, ಹಾನಿಗೊಳಗಾದ ಸರ್ಕ್ಯೂಟ್ ಮತ್ತು ಐಇಡಿ ತಯಾರಿಸಲು ಅಗತ್ಯವಿರುವ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿಸಲಾಗಿದೆ.

ಏತನ್ಮಧ್ಯೆ, ಶಾರೀಕ್ ಮತ್ತು ಅವರ ಸಹಚರರ ಪರವಾಗಿ ಹಾಜರಾಗದಂತೆ ವಿಎಚ್‌ಪಿ ಮತ್ತು ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರನ್ನು ಒತ್ತಾಯಿಸಿದೆ.

Post a Comment

Previous Post Next Post