ಶಿವಮೊಗ್ಗ; ಡಿವಿಎಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ; ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್ ಅವರಿಂದ ಮಾದಕ ವಸ್ತುವಿನ ವ್ಯಸನದ ದುಷ್ಪರಿಣಾಮಗಳ ಕುರಿತು ಮಾಹಿತಿ.


                ಶ್ರೀ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್  ಅಧಿಕಾರಿ ಮಾದಕ ವಸ್ತುವಿನ ವ್ಯಸನದ ಬಗ್ಗೆ 
                                                 ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸುತ್ತಿರುವುದು

ದಿನಾಂಕ 31-01-2023 ರಂದು ಡಿವಿಎಸ್ ಶಿಕ್ಷಣ ಸಂಸ್ಥೆ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ  ಸಪ್ತಾಹದ ಅಂಗವಾಗಿ ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಮತ್ತು ಮಾದಕ ವಸ್ತುವಿನ ವ್ಯವಸನದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಯನ್ನು ನೀಡಿದರು.

                     ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಡಿವಿಎಸ್ ಕಾಲೇಜಿನ ವಿದ್ಯಾರ್ಥಿಗಳು.

ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಬಾಲರಾಜ್, ಡಿವೈ ಎಸ್.ಪಿ ಶಿವಮೊಗ್ಗ ಎ ಉಪ ವಿಭಾಗ, ಶ್ರೀ ಚಂದ್ರಶೇಖರ್ ಟಿ.ಕೆ ಪಿಐ ಕೋಟೆ ಪೊಲೀಸ್ ಠಾಣೆ ಹಾಗೂ ಡಿವಿಎಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಅವರು ಹಾಗೂ ಕಾಲೇಜಿನ ಶಿಕ್ಷಕ ವೃಂದ ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು  ಉಪಸ್ಥಿತರಿದ್ದರು.

       ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಇತರೆ ಎಲ್ಲ ಅಧಿಕಾರಿಗಳು ಹಾಗೂ ಡಿವಿಎಸ್ ಕಾಲೇಜಿನ                                                                                   ಪ್ರಾಂಶುಪಾಲರು.Post a Comment

Previous Post Next Post