ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ ; ನಾಳೆ ಸಾಗರ ಟೌನ್ ಬಂದ್

ಶಿವಮೊಗ್ಗ: ಸಾಗರದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ. 

 ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ. ಹೆಚ್ ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ. 

ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್ ಭಾಗಿಯಾಗಿದ್ದ.ಯಾತ್ರೆ ಹೋಗುವ ವೇಳೆ ಸುನೀಲ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಮೀರ್ ಅದೇ ನೆಪವನ್ನು ಇಟ್ಟುಕೊಂಡು ಸುನೀಲ್ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಚ್ಚು ಬೀಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂದ ಸಾಗರ ಪೊಲೀಸ್ ಠಾಣೆಯಲ್ಲಿ ಸುನೀಲ್ ದೂರು ನೀಡಿದ್ದಾರೆ.

ಇದರ ಬೆನ್ನಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಮುಂಭಾಗ ಕಾರ್ಯಕರ್ತರ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಸುನೀಲ್ ಮೇಲೆ ಹಲ್ಲೆ ಮಾಡಿದವನ ಬಂದಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. 

     ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆಗೆ ಯತ್ನ ಖಂಡಿಸಿ ನಾಳೆ ಸಾಗರ ಟೌನ್ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ

Post a Comment

Previous Post Next Post