ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರು ಇಡಲು ನಿರ್ಧಾರ : ಬಿಎಸ್ ವೈ.

 ಶಿವಮೊಗ್ಗದ ಸಾಗಣೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

    ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಫೆ.07 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಸಂಬಂಧ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನಿಡಲು ತೀರ್ಮಾನಿಸಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ದಾರೆ. ಎಂದು ತಿಳಿಸಿದ್ದಾರೆ.ಈ ಬಗ್ಗೆ ಅಧಿವೇಶನದಲ್ಲಿ ನಾನೇ ಪ್ರಸ್ತಾವನೆಯನ್ನು ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

Post a Comment

Previous Post Next Post