ಬೆಂಗಳೂರಿನ ಹಡ್ಸನ್ ವೃತ್ತದ ಬಳಿ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಸಂಸ್ಥೆ ನಿರ್ಮಿಸಿರುವ ಹಾಪ್ ಕಾಮ್ಸ್ ಕಟ್ಟಡ ಎಂದೇ ಪ್ರಸಿದ್ಧಿಯಾಗಿರುವ ಕಟ್ಟಡವು ಕಬ್ಬನ್ ಪಾರ್ಕ್‌ನಿಂದ ಹೊರಗಿದ್ದು, ಅದನ್ನು ಬಳಕೆ ಮಾಡಲು ಕೃಷಿಕ್ ಸಮಾಜಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರಿನ ಹಡ್ಸನ್ ವೃತ್ತದ ಬಳಿ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಸಂಸ್ಥೆ ನಿರ್ಮಿಸಿರುವ ಹಾಪ್ ಕಾಮ್ಸ್ ಕಟ್ಟಡ ಎಂದೇ ಪ್ರಸಿದ್ಧಿಯಾಗಿರುವ ಕಟ್ಟಡವು ಕಬ್ಬನ್ ಪಾರ್ಕ್‌ನಿಂದ ಹೊರಗಿದ್ದು, ಅದನ್ನು ಬಳಕೆ ಮಾಡಲು ಕೃಷಿಕ್ ಸಮಾಜಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಕಬ್ಬನ್ ಉದ್ಯಾನ ವ್ಯಾಪ್ತಿ ಪ್ರದೇಶದಲ್ಲಿ ಅಕ್ರಮವಾಗಿ ಹಲವು ಕಟ್ಟಡ ನಿರ್ಮಿಸಲಾಗಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್ ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ನ್ಯಾಯಾಲಯವು ಜನವರಿ 25ರಂದು ಮಾಡಿದ್ದ ಆದೇಶದಂತೆ ಫೆಬ್ರವರಿ 4ರಂದು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪಕ್ಷಕಾರರ ಸಮ್ಮುಖದಲ್ಲಿ ಕೃಷಿಕ್ ಸಮಾಜದ ಕಟ್ಟಡವಿರುವ ಜಾಗದ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಕೃಷಿಕ್ ಸಮಾಜ ಕಟ್ಟಡವು ಕಬ್ಬನ್ ಪಾರ್ಕ್ ಪ್ರದೇಶದ ವ್ಯಾಪ್ತಿಯಿಂದ ಹೊರಗಿದೆ ಎಂದು ಬೆಂಗಳೂರು ನಗರ ಸರ್ವೇ ವಲಯದ ಸಹಾಯಕ ನಿರ್ದೇಶಕಿ ಹರ್ಷ ಕುಮಾರಿ ಸಲ್ಲಿಸಿರುವ ಅನುಪಾಲನಾ ವರದಿ ಪರಿಗಣಿಸಿ ಪೀಠವು ಆದೇಶ ಮಾಡಿದೆ.
ಸರ್ವೇ ವರದಿಯನ್ನು ಪರಿಗಣಿಸಿದರೆ ಕಟ್ಟಡ ಉಪಯೋಗ ಮಾಡಲು ಕೃಷಿಕ್ ಸಮಾಜಕ್ಕೆ ಅನುಮತಿ ನೀಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್, ಈ ಅನುಮತಿ ಅರ್ಜಿ ಕುರಿತ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಪಪಡಿಸಿದೆ.

Post a Comment