ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು: ಪ್ರಮೋದ್ ಮುತಾಲಿಕ್ ಕರೆ

 ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

                                                     ಪ್ರಮೋದ್ ಮುತಾಲಿಕ್

ಬಾಗಲಕೋಟೆ: ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು. ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಸ್ಬೇಕು ಎಂದು ನಾನು ಹೇಳುತ್ತೇನೆ. 

ನಿಮಗೆ ರಕ್ಷಣೆ, ಉದ್ಯೋಗ ಎಲ್ಲಾ ರೀತಿಯ ಜವಾಬ್ದಾರಿಯನ್ನು ಶ್ರೀರಾಮ ಸೇನೆ ಕೊಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.Post a Comment

Previous Post Next Post