ಇದು ಬಿಸಿಲು ಕುದುರೆ ಬಜೆಟ್, ಯಾರ ಕೈಗೂ ಸಿಗಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಇದೊಂದು ಬಿಸಿಲು ಕುದುರೆ ಬಜೆಟ್ ಆಗಿದ್ದು, ಯಾರ ಕಣ್ಣಿಗೂ ಕಾಣಿಸುವುದಿಲ್ಲ, ಯಾರ ಕೈಗೂ ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.


   ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಡಬಲ್‌ ಇಂಜಿನ್‌ ಕಟ್ಟು ನಿಂತು ಹೊಗೆ ಬರುತ್ತಿದೆ. ಬೊಮ್ಮಾಯಿ ಅವರು ತಾವೂ ಒಂದು ಬಜೆಟ್‌ ಮಂಡಿಸಿದ್ದೇನೆಂದು ಹೇಳಿಕೊಳ್ಳಲು ಇದರ ಪ್ರತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ. ಅದನ್ನು ಜಾತ್ರೆಯ ಕನ್ನಡಕ ಹಾಕಿಕೊಂಡು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

   ರಾಮನಗರದಲ್ಲಿ ರಾಮಮಂದಿರ ಕಟ್ಟುವುದಾಗಿ ತಿಳಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ, ಮೊದಲು ಅವರ ಪಕ್ಷದ ಕಚೇರಿ ಕಟ್ಟಲು ಹೇಳಿ ಎಂದು ತಿರುಗೇಟು ನೀಡಿದರು.

Post a Comment

Previous Post Next Post