ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ: ವಕೀಲರನ್ನು ಜೈಲಿಗೆ ಕಳುಹಿಸಿದ ಕರ್ನಾಟಕ ಹೈಕೋರ್ಟ್!

 ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ  ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

                                                                  ಕರ್ನಾಟಕ ಹೈಕೋರ್ಟ್

By : Rekha.M
Online Desk

ಬೆಂಗಳೂರು: ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ  ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಫೆಬ್ರವರಿ 2, 2023 ರಂದು ನ್ಯಾಯವಾದಿ ಕೆಎಸ್ ಅನಿಲ್ ವಿರುದ್ಧ ಹೈಕೋರ್ಟ್ 2019 ರಲ್ಲಿ ಆರಂಭಿಸಿದ ಕ್ರಿಮಿನಲ್ ನಿಂದನೆ ಪ್ರಕ್ರಿಯೆಯಲ್ಲಿಈ  ಆದೇಶ ನೀಡಿದೆ.

ಮೌಖಿಕವಾಗಿ ಅಥವಾ ಲಿಖಿತ  ಅರ್ಜಿ ಸಲ್ಲಿಸಲು ಸ್ವಲ್ಪ ಸಮಯ ಅಗತ್ಯವಿದೆಯೇ ಎಂದು ನಾವು ಆರೋಪಿಯನ್ನು ಕೇಳಿದ್ದೆವು. ಆದರೆ, ಅವರು ನ್ಯಾಯಾಲಯದ ಪ್ರಶ್ನೆಯನ್ನು ತಪ್ಪಿಸಿ ದುರಹಂಕಾರದಿಂದ ವರ್ತಿಸಲು ಪ್ರಾರಂಭಿಸಿದರು,  ನಾವು ತಾಳ್ಮೆಯಿಂದ ಕೇಳಲು ಪ್ರಯತ್ನಿಸಿದರೂ, ಆರೋಪಿಗಳು ನ್ಯಾಯಾಲಯದಲ್ಲಿ ಸನ್ನೆ ಮಾಡಲು ಪ್ರಾರಂಭಿಸಿದರು ಎಂದು ನ್ಯಾಯಾಲಯ ಹೇಳಿದೆ.

ಈ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಆರೋಪಗಳನ್ನು ಮಾಡುವುದು ಆರೋಪಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಯಾವುದೇ ಗೌರವವಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರಾಕ್ಟೀಸ್ ವಕೀಲರಾಗಿ, ಆರೋಪಿಯ ಹಿಂದಿನ ಸಂದರ್ಭಗಳಲ್ಲಿಯೂ ಸಹ, ನ್ಯಾಯಾಂಗ ವ್ಯವಸ್ಥೆ ಹಾಗೂ ನಿರ್ದಿಷ್ಟವಾಗಿ ನ್ಯಾಯಾಂಗ ಅಧಿಕಾರಿಗಳ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದರ ಜೊತೆಗೆ ಸಂಸ್ಥೆಯನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದಾರೆ. ನ್ಯಾಯಾಂಗ ವ್ಯವಸ್ಥೆಯ ಇಮೇಜ್ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುತ್ತದೆ ಎಂದು ವಿಭಾಗೀಯ ಪೀಠ ತಿಳಿಸಿದೆ.

ನ್ಯಾಯಾಂಗ ನಿಂದನೆ ಎಸಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶವನ್ನು ಹೊರಡಿಸುವುದನ್ನು ಬಿಟ್ಟು ಈ ನ್ಯಾಯಾಲಯಕ್ಕೆ ಬೇರೆ ದಾರಿಯೇ ಇಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಮುಂದಿನ ವಿಚಾರಣೆಯ ದಿನಾಂಕ ಫೆಬ್ರವರಿ 10, 2023 ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ನ್ಯಾಯಾಲಯ ಹೇಳಿದೆ.

2019 ರಲ್ಲಿ ಅನಿಲ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಆರಂಭಿಸಲಾಗಿತ್ತು, ಹೈಕೋರ್ಟ್‌ನ ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಮಾಡಿದ ಆರೋಪಗಳು ನ್ಯಾಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಹೇಳಿತ್ತು.  ನ್ಯಾಯಾಧೀಶರ ವಿರುದ್ಧ  ಮಾಡಿರುವ ಎಲ್ಲಾ ಆರೋಪಗಳನ್ನು ಬೇಷರತ್ತಾಗಿ ಹಿಂಪಡೆಯಲು ಹಾಗೂ ಬೇಷರತ್ ಕ್ಷಮೆಯಾಚಿಸಲು ಆರೋಪಿಗೆ ಕಾಲಾವಕಾಶ ನೀಡಲಾಗಿದ್ದರೂ,  ಅವರು ಕ್ಷಮೆ ಕೇಳಿರಲಿಲ್ಲ, ಹೀಗಾಗಿ ಜೈಲಿಗೆ ಕಳುಹಿಸಲಾಗಿದೆ.
Post a Comment

Previous Post Next Post