ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ: ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ; ಚುನಾವಣಾ ಆಯೋಗ

 ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ (Karnataka Assembly Election 2023) ದಿನಾಂಕ ಪ್ರಕಟವಾಗಿದ್ದು, ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

                                                                         ಸಂಗ್ರಹ ಚಿತ್ರ

By : Rekha.M
Online Desk
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ (Karnataka Assembly Election 2023) ದಿನಾಂಕ ಪ್ರಕಟವಾಗಿದ್ದು, ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ನಡೆಯಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದು, ದಿನಾಂಕ 29-03-2023ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 10-05-2023ರಂದು ಮತದಾನ ನಿಗದಿಪಡಿಸಲಾಗಿದೆ ಎಂದಿದ್ದಾರೆ.

Post a Comment

Previous Post Next Post