ಸರ್ಕಾರದ ಭರವಸೆ ತಿರಸ್ಕರಿಸಿದ ಸಾರಿಗೆ ನೌಕರರು: ಮಾರ್ಚ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

 ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

                                                              ಸಂಗ್ರಹ ಚಿತ್ರ

By : Rekha.M
Online Desk

ಬೆಂಗಳೂರು: ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ. ವೇತನ ಹೆಚ್ಚಳ ಸಂಬಂಧ ಅಧಿಕೃತ ಆದೇಶಗಳು ಬಂದಿಲ್ಲ. ಈ ಕುರಿತ ವಿವರಗಳೂ ನಮಗೆ ಸಿಕ್ಕಿಲ್ಲ. ಶೇ.20ಕ್ಕಿಂತ ಕಡಿಮೆ ವೇತನ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ. ಸರಕಾರ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಇದು ನ್ಯಾಯಸಮ್ಮತವಲ್ಲ. ಹೀಗಾಗಿ ಈ ಹಿಂದೆ ಘೋಷಿಸಿದಂತೆ ಮಾರ್ಚ್ 21 ರಿಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್ಕಾಂ ಸಿಬ್ಬಂದಿಗೆ ಶೇ.20ರಷ್ಟು ವೇತನ ಹೆಚ್ಚಳ
2023ರ ಏಪ್ರಿಲ್ 22ರಿಂದ ಅನ್ವಯವಾಗುವಂತೆ ಕೆಪಿಟಿಸಿಎಲ್ ಮತ್ತು ಎಸ್ಕಾಂ ನೌಕರರ ವೇತನವನ್ನು ಶೇ.20ರಷ್ಟು ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಗುರುವಾರ ಹೇಳಿದ್ದಾರೆ.

ವೇತನ ಹೆಚ್ಚಳ ಮಾಡುವಂತೆ ನೌಕರರು ಹಲವು ಬಾರಿ ಮನವಿ ಮಾಡಿದ್ದು, ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿಸಿದ್ದಾರೆ.


Post a Comment

Previous Post Next Post