ಮಂಗಳೂರು: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

 ಮಂಗಳೂರಿನ ಲಾಡ್ಜ್‌ ಒಂದರಲ್ಲಿ ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಮಂಗಳೂರಿನ ಕೆಎಸ್ ರಾವ್ ರೋಡ್ ನಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರ ವಿವರ ಲಭ್ಯವಾಗಿಲ್ಲ.

                                                                ಸಾಂದರ್ಭಿಕ ಚಿತ್ರ

By : Rekha.M
Online Desk
ಮಂಗಳೂರು: ಮಂಗಳೂರಿನ ಲಾಡ್ಜ್‌ ಒಂದರಲ್ಲಿ ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಮಂಗಳೂರಿನ ಕೆಎಸ್ ರಾವ್ ರೋಡ್ ನಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರ ವಿವರ ಲಭ್ಯವಾಗಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇವರು ಕಾಸರಗೋಡು ಇಲ್ಲವೇ ಕೇರಳ ಭಾಗದವರು ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.  ಆತ್ಮಹತ್ಯೆ ಮಾಡಿಕೊಂಡವರು ಯಾರು? ಎಲ್ಲಿಯವರು? ಆತ್ಮಹತ್ಯೆಗೆ ಕಾರಣವೇನು? ಎನ್ನುವುದು ತಿಳಿದುಬರಬೇಕಿದೆ.

Post a Comment

Previous Post Next Post