ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

 ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

                                                           ಸಾಂದರ್ಭಿಕ ಚಿತ್ರ

By :Rekha.M
Online Desk

ಬೆಳಗಾವಿ: ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.

ಮೃತ ಐಶ್ವರ್ಯಾ ಎಂಬ ಯುವತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ ಮೇಲೆ ಹರಿದು ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಯುವತಿಯ ತಲೆಗೆ ಗಂಭೀರವಾಗಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಯುವತಿಯು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಿವಾಸಿಯಾಗಿದ್ದು,ಈ ಅಪಘಾತದ ವಿಚಾರವಾಗಿ ಅಥಣಿ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಬಂದು ಕಾರು ಚಾಲಕನನ್ನು ಬಂಧಿಸಿದ್ದಾರೆ.


Post a Comment

Previous Post Next Post