ಬೆಂಗಳೂರು: ಗಣಪತಿ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದವರಿಗೆ ಚೂರಿ ಇರಿತ, ಓರ್ವ ಸಾವು, ಇಬ್ಬರು ಆಸ್ಪತ್ರೆಗೆ ದಾಖಲು!

 ಮೆಜೆಸ್ಟಿಕ್ ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಈ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. 

                                                                  ಸಾಂದರ್ಭಿಕ ಚಿತ್ರ

By : Rekha.M
Online Desk

ಬೆಂಗಳೂರು: ಮೆಜೆಸ್ಟಿಕ್ ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಈ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. 

ಮೃತನನ್ನು ಮಲ್ಲಿನಾಥ್ ಬಿರಾದರ್ ಎಂದು ಗುರುತಿಸಲಾಗಿದೆ. ಮಲ್ಲಿನಾಥ್ ಬಿರಾದರ್ ಸೇರಿದಂತೆ ಇನ್ನಿಬ್ಬರು ಕಟ್ಟೆ ಮೇಲೆ ಕುಳಿತ್ತಿದ್ದಾಗ ಮಾನಸಿಕ ಅಶ್ವಸ್ಥನಾಗಿರುವ ಗಣೇಶ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಗಣೇಶನನ್ನು ತಡೆಯಲು ಬಂದ ವ್ಯಕ್ತಿಯ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. 

ಘಟನೆ ಕುರಿತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸರು ಗಾಯಗೊಂಡಿದ್ದ ಮೂವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಮಲ್ಲಿನಾಥ್ ಬಿರಾದರ್ ಮೃತಪಟ್ಟಿದ್ದು ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರೆಯುತ್ತಿದೆ.

Post a Comment

Previous Post Next Post